ರಾಜ್ಯ ಯುವ ವಿಜ್ಞಾನಿ ಪ್ರಶಸ್ತಿ ಮುಡಿಗೇರಿಸಿದ ಕೊಡಗಿನ ವಿದ್ಯಾರ್ಥಿನಿ ಕೆ.ಗಾಯತ್ರಿ

Prasthutha|

ಮಡಿಕೇರಿ: ರಾಜ್ಯಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ವಿದ್ಯಾರ್ಥಿನಿ ಕೆ. ಗಾಯತ್ರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

- Advertisement -

 ಕರ್ನಾಟಕ ರಾಜ್ಯ ವಿಜ್ಞಾನ ಪರಿಷತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬಾಗಲಕೋಟೆಯಲ್ಲಿ ನಡೆದ ರಾಜ್ಯಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಕುಶಾಲನಗರ ಫಾತಿಮ ಕಾನ್ವೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಕೆ. ಗಾಯತ್ರಿ ರಾಜ್ಯ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಪ್ರಶಸ್ತಿ ಪತ್ರ, ಸ್ಮರಣಿಕೆಯೊಂದಿಗೆ ತಲಾ 10 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗಿದೆ. ವಿದ್ಯಾರ್ಥಿನಿ ಗಾಯತ್ರಿ ಕುಶಾಲನಗರದ ಪಿ.ಕಾರ್ತೀಶನ್ ಮತ್ತು ಫ್ಲಾರೆನ್ಸ್ ಕೆ ದಂಪತಿಯ ಪುತ್ರಿ.

Join Whatsapp