ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ವ್ಯಾಪ್ತಿಯ ಕಾಫಿ ಎಸ್ಟೇಟ್ನ ಲ್ಲಿ ಹುಲಿಯ ಶವ ಪತ್ತೆಯಾಗಿದೆ.
ಹುಲಿ ಮೇಲಿನ ಗಾಯಗಳಿಂದಾಗಿ ಅದು ಇನ್ನೊಂದು ಹುಲಿಯೊಂದಿಗೆ ನಡೆದ ಕಾದಾಟದಲ್ಲಿ ಪ್ರಾಣಬಿಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ಶಿಷ್ಟಾಚಾರದ ಅಡಿಯಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರವಾದ ಕಾರಣ ಲಭ್ಯವಾಗಲಿದೆ. ಕಳೆದ ನಾಲ್ಕೈದು ದಿನಗಳಿಂದ ಹುಲಿಯು ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿತ್ತು. ಹೀಗಾಗಿ, ಹುಲಿಯನ್ನು ಸೆರೆಹಿಡಿಯಲು ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.