ಮಡಿಕೇರಿ: ಕೋಳಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಮಗುಚಿಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ.
ಮಂಗಳೂರು ಮೂಲದ ನಾಗಭೂಷಣ್ ಮೃತ ಲಾರಿ ಚಾಲಕ ಎಂದು ತಿಳಿದು ಬಂದಿದೆ.
ಇಂದು ಮುಂಜಾನೆ ಸುಮಾರು 5 ಗಂಟೆ ಸಮಯದಲ್ಲಿ ಮೈಸೂರಿನಿಂದ ಮಂಗಳೂರು ಕಡೆಗೆ ಕೋಳಿ ಸಾಗಾಟ ಮಾಡುತಿದ್ದ ಲಾರಿ ಸುಂಟಿಕೊಪ್ಪ ಸಮೀಪ ಮಾರುತಿನಗರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿಕೊಂಡಿದ್ದು, ಲಾರಿ ಚಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ.