ಮಡಿಕೇರಿ: ಆನೆ ದಂತ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಸಿಐಡಿ ಪೊಲೀಸ್ ಅರಣ್ಯ ಘಟಕ ತಂಡ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಳಿ ಆರೋಪಿಗಳನ್ನು ಬಂಧಿಸಿದರು.
ಪಿ. ಆಶಿತ್ ಮತ್ತು ಸುಭಾಷ್ ಬಂಧಿತರು. ಬಂಧಿತರಿಂದ ಒಂದು ಆನೆದಂತವನ್ನು ವಶಪಡಿಸಿಕೊಂಡಿದ್ದಾರೆ.
ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಮಂಜುನಾಥ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.