ಕುಮಾರಸ್ವಾಮಿಯದ್ದು ಪುಟಗೋಸಿ ರಾಜಕಾರಣ : ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ

Prasthutha|

ಬೆಂಗಳೂರು : ರಾಜ್ಯ ಬಿಜೆಪಿ ಸರಕಾರದ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರದ್ದು ಪುಟಗೋಸಿ ರಾಜಕಾರಣ ಎಂದು ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ.

- Advertisement -

ಕುಮಾರಸ್ವಾಮಿ ಅವರನ್ನು ಮಣ್ಣಿನ ಮಕ್ಕಳು ಅಂತಾರೆ. ಆದರೆ ಅಂತಹವರೇ ರೈತರ ಬಾಯಿಗೆ ಮಣ್ಣು ಹಾಕೋ ಕೆಲಸ ಮಾಡಿದ್ರು. ರೈತರ ಪರ ಕಾಳಜಿಯೇ ಇಲ್ಲ. ಕುಮಾರಸ್ವಾಮಿ ಮಣ್ಣಿನ ಮಕ್ಕಳ ದ್ರೋಹಿ. ಅವರದ್ದು ಏನಿದ್ದರೂ ಪುಟಗೋಸಿ ರಾಜಕಾರಣ ಎಂದು ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

Join Whatsapp