Home ಟಾಪ್ ಸುದ್ದಿಗಳು ರೈತ ಸಂಘದ ಅಧ್ಯಕ್ಷ ಸ್ಥಾನ ಕಳೆದುಕೊಂಡ ಕೋಡಿಹಳ್ಳಿ ಚಂದ್ರಶೇಖರ್

ರೈತ ಸಂಘದ ಅಧ್ಯಕ್ಷ ಸ್ಥಾನ ಕಳೆದುಕೊಂಡ ಕೋಡಿಹಳ್ಳಿ ಚಂದ್ರಶೇಖರ್

ಶಿವಮೊಗ್ಗ: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ.

ಅವರ ಸ್ಥಾನಕ್ಕೆ ಹೆಚ್.ಆರ್. ಬಸವರಾಜಪ್ಪ ಅವರನ್ನು ನೇಮಿಸಲಾಗಿದೆ.

ಶಿವಮೊಗ್ಗದ ರೈತ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಖಾಸಗಿ ಚಾನೆಲ್ ನಲ್ಲಿ ಬಂದ ಭ್ರಷ್ಟಾಚಾರ ಆರೋಪವನ್ನು ಕೋಡಿಹಳ್ಳಿ ಚಂದ್ರಶೇಖರ್ ಅವರು ನಿರಾಕರಣೆ ಮಾಡಿಲ್ಲ. ತನಿಖೆ ಆಗುವವರೆಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದೆವು. ಆದರೆ ಅವರು ನೀಡದ ಕಾರಣ ನಾವು ವಜಾ ಮಾಡುತ್ತೇವೆ ಎಂದು ರೈತ ಸಂಘ  ತಿಳಿಸಿದೆ.

Join Whatsapp
Exit mobile version