ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರ ತವರು ಗ್ರಾಮವಾದ ಕೋಡಿಂಬಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಪಾಲಾಗಿದೆ.
ಬಿಜೆಪಿಯ ಭದ್ರಕೋಟೆಯೆಂದೇ ಬಿಂಬಿತವಾಗಿದ್ದ ಕೋಡಿಂಬಾಡಿ ಗ್ರಾಮ ಪಂಚಾಯತ್’ನ ಅಧಿಕಾರವನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಲ್ಲಿಕಾ ಅಶೋಕ್ ಹಾಗೂ ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಆಯ್ಕೆಯಾಗಿದ್ದಾರೆ.
ಒಟ್ಟು 11 ಮಂದಿ ಸದಸ್ಯರ ಪೈಕಿ 6 ಬಿಜೆಪಿ ಮತ್ತು 5 ಕಾಂಗ್ರೆಸ್ ಬೆಂಬಲಿತರಿದ್ದು, ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯೋರ್ವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರ ಮತ ಚಲಾವಣೆ ಮಾಡುವ ಮೂಲಕ ಗ್ರಾ.ಪಂ. ಕಾಂಗ್ರೆಸ್ ಪಾಲಾಗಿದೆ.