ಕೋಲ್ಕತ್ತ: ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣದಲ್ಲಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ.
ಕೋಲ್ಕತ್ತಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಇಂದು ತೀರ್ಪು ಪ್ರಕಟಿಸಿದರು. ಅತ್ಯಾಚಾರ, ಕೊಲೆ ಸೆಕ್ಷನ್ ಗಳಲ್ಲಿ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್ ತೀರ್ಪು ಪ್ರಕಟಿಸಿರುವುದು ವಿಶೇಷ.
ಶಿಕ್ಷೆಯ ಪ್ರಮಾಣವನ್ನು ಸೋಮವಾರ (ಜ.20) ಪ್ರಕಟಿಸಲಿದ್ದಾರೆ.