ಕೊಳ್ಳೇಗಾಲ ನಗರಸಭೆ ಉಪಚುನಾವಣೆ: ಬಿಜೆಪಿ ಜಯಭೇರಿ, 1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ ಕಾಂಗ್ರೆಸ್

Prasthutha|

ಚಾಮರಾಜನಗರ: ಕೊಳ್ಳೇಗಾಲ ನಗರಸಭೆಗೆ ನಡೆದ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಏಳು ಸ್ಥಾನಗಳ ಪೈಕಿ ಬಿಜೆಪಿ 6 ಸ್ಥಾನಗಳನ್ನು ಗೆದ್ದು ಅಧಿಕಾರ ಉಳಿಸಿಕೊಂಡಿದೆ.
ಇನ್ನು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆದ್ದರೆ, ಬಿಎಸ್ಪಿ ಶೂನ್ಯ ಸಾಧನೆ ಮಾಡಿದೆ.

- Advertisement -


ಹಿಂದೆ ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಕಾರಣಕ್ಕೆ ಹಿಂದಿನ ಚುನಾವಣೆಯಲ್ಲಿ ಗೆದ್ದಿದ್ದ ಬಿಎಸ್ ಪಿಯ ಏಳು ಸದಸ್ಯರ ಸದಸ್ವತ್ವ ಅನರ್ಹ ಆಗಿತ್ತು. ಇದರಿಂದ ತೆರವಾದ ಏಳು ವಾರ್ಡ್ ಗಳಿಗೆ ಉಪಚುನಾವಣೆ ನಡೆದಿತ್ತು.


ಸದಸ್ಯತ್ವ ಅನರ್ಹಗೊಂಡಿದ್ದ ಏಳು ಜನರ ಪೈಕಿ ಆರು ಮಂದಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಈ ಪೈಕಿ ಐವರು ಗೆಲುವು ಸಾಧಿಸಿದ್ದಾರೆ. 2ನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ನಾಗಮಣಿ ಅವರು ಮಾತ್ರ ಸೋತಿದ್ದಾರೆ.

- Advertisement -


ಬಿಎಸ್ಪಿಯಿಂದ ಅನರ್ಹಗೊಂಡ ಏಳೂ ಮಂದಿಗೆ ಶಾಸಕ ಎನ್.ಮಹೇಶ್ ಬಿಜೆಪಿಯಿಂದ ಟಿಕೆಟ್ ಕೊಡಿಸಿದ್ದರು. ಏಳು ಮಂದಿಯಲ್ಲಿ ಆರು ಮಂದಿಯನ್ನು ಗೆಲ್ಲಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ.



Join Whatsapp