Home ಟಾಪ್ ಸುದ್ದಿಗಳು ಕೊಳ್ಳೇಗಾಲ ನಗರಸಭೆ ಉಪಚುನಾವಣೆ: ಜನರ ತೀರ್ಪನ್ನು ಗೌರವಿಸುತ್ತೇವೆ: SDPI ಮುಖಂಡ ದೇವನೂರು ಪುಟ್ಟನಂಜಯ್ಯ

ಕೊಳ್ಳೇಗಾಲ ನಗರಸಭೆ ಉಪಚುನಾವಣೆ: ಜನರ ತೀರ್ಪನ್ನು ಗೌರವಿಸುತ್ತೇವೆ: SDPI ಮುಖಂಡ ದೇವನೂರು ಪುಟ್ಟನಂಜಯ್ಯ

ಬೆಂಗಳೂರು: ಇತ್ತೀಚೆಗೆ ನಡೆದ ಕೊಳ್ಳೇಗಾಲ ನಗರಸಭೆಯ ಉಪಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ಎಸ್‌ಡಿಪಿಐ ಪಕ್ಷ ವಿನಯಪೂರ್ವಕವಾಗಿ ಸ್ವೀಕರಿಸುತ್ತದೆ. ಈ ಫಲಿತಾಂಶದ ಮೂಲಕ ಜನರು ಪಕ್ಷವನ್ನು ಇನ್ನಷ್ಟು ಜವಾಬ್ದಾರಿಯುತವಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದ್ದಾರೆ. ನಾವು ಜನರ ಆಶಯದಂತೆ ಸಾಮಾಜಿಕ ಜವಾಬ್ದಾರಿಯನ್ನು ಇನ್ನಷ್ಟು ಗಂಭೀರವಾಗಿ ಮುಂದುವರಿಸಿಕೊಂಡು ಹೋಗಲಿದ್ದೇವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ ಏನೇ ಇರಲಿ, ನಮ್ಮ ಪಕ್ಷ ಸಂವಿಧಾನಬದ್ಧವಾಗಿ ಚುನಾವಣೆ ಎದುರಿಸಿದ ತೃಪ್ತಿ ಇದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ರೀತಿಯಲ್ಲಿ ಜನರಿಗೆ ಆಮಿಷಗಳನ್ನು ಒಡ್ಡಿ, ಹಣ ಹೆಂಡ ಹಂಚಿ ಚುನಾವಣೆಗಳನ್ನು ಗೆಲ್ಲುವಂತಹ ಅಡ್ಡದಾರಿಗಳನ್ನು ನಮ್ಮ ಪಕ್ಷ ಎಂದೂ ಹಿಡಿಯುವುದಿಲ್ಲ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಲು ನಾವು ನಿರಂತರವಾಗಿ ಶ್ರಮಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಜನರು ಆಮಿಷಗಳನ್ನು ತಿರಸ್ಕರಿಸಿ, ಎಸ್‌ಡಿಪಿಐ ಪಕ್ಷದ ಸಾಮಾಜಿಕ ಕಾರ್ಯ ಮತ್ತು ಬದ್ಧತೆಯನ್ನು ಗುರುತಿಸಿ ನಮ್ಮ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version