ಉಳ್ಳಾಲ: ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆಯ ಉರುಮಣೆ ಬಳಿ ನಡೆದಿದೆ.
ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ ಮೆಡಿಕಲ್ ಕಾಲೇಜಿನ ಬಸ್ ಪರಸ್ಪರ ಡಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.