ಕೊಪ್ಪಳ: ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ..!

Prasthutha|

ಗಡ್ಡಕ್ಕೆ ಬೆಂಕಿ ಹಚ್ಚಿದ ಸಂಘಪರಿವಾರದ ಗೂಂಡಾಗಳು: ಆರೋಪ

- Advertisement -

ಕೊಪ್ಪಳ: ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವ್ಯಕ್ತಿಯ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.

ಮೆಹಬೂಬ್ ನಗರದ ಹುಸೇನಸಾಬ್ ಹಲ್ಲೆಗೊಳಾಗದವರು.

- Advertisement -

ಹುಸೇನ್ ಸಾಬ್ ಕೆಲಸದ ನಿಮಿತ್ತ ಹೊಸಪೇಟೆಗೆ ಹೋಗಿ ನ. 25ರಂದು ಮಧ್ಯರಾತ್ರಿ ಗಂಗಾವತಿಗೆ ಬಂದು ಮನೆಗೆ ಹೋಗಲು ಆಟೊ ನಿಲ್ದಾಣದ ಬಳಿ ಕಾಯುತ್ತಿದ್ದರು. ಈ ವೇಳೆ ಬೈಕ್ ಮೇಲೆ ಬಂದ ಕೆಲವು ಯುವಕರು ಎಲ್ಲಿಗೆ ಹೋಗುತ್ತಿದ್ದಿಯಾ? ಎಂದು ಪ್ರಶ್ನಿಸಿದರು. ಬಲವಂತವಾಗಿ ಬೈಕ್ ಮೇಲೆ ಕೂಡಿಸಿಕೊಂಡು ಪಂಪಾನಗರ ಬಳಿ ಕರೆದುಕೊಂಡು ಹೋದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮುಸ್ಲಿಂ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೊಲೆ ಬೆದರಿಕೆ ಒಡ್ಡಿದ್ದಾರೆ. ಸಿದ್ದಿಕೇರಿಗೆ ಹೋಗುವ ಮಾರ್ಗದಲ್ಲಿನ ರೈಲ್ವೆ ಸೇತುವೆ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ. ನೆಲದ ಮೇಲೆ ಬೀಳಿಸಿ ಹಲ್ಲೆ ಮಾಡಿದ ಯುವಕರ ಗುಂಪು ನನ್ನ ಗಡ್ಡಕ್ಕೆ ಬೆಂಕಿ ಹಚ್ಚಿದೆ ಎಂದು ಆರೋಪಿಸಿದ್ದಾರೆ.

Join Whatsapp