Home ಟಾಪ್ ಸುದ್ದಿಗಳು ಕೊಪ್ಪಳ ದಲಿತರ ಮೇಲೆ ದೌರ್ಜನ್ಯ: 97 ಅಪರಾಧಿಗಳಿಗೆ ಜಾಮೀನು ಮಂಜೂರು

ಕೊಪ್ಪಳ ದಲಿತರ ಮೇಲೆ ದೌರ್ಜನ್ಯ: 97 ಅಪರಾಧಿಗಳಿಗೆ ಜಾಮೀನು ಮಂಜೂರು

ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೊಪ್ಪಳ ಜಿಲ್ಲಾ ಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನಿಡಿದೆ.


ಅಲ್ಲದೇ 98 ಜನ ಅಪರಾಧಿಗಳಲ್ಲಿ 97 ಮಂದಿಗೆ ಧಾರವಾಡ ಹೈಕೋರ್ಟ್ ಪೀಠ ಜಾಮೀನು ನೀಡಿದೆ.


ಪ್ರಕರಣದ ಎ1 ಮಂಜುನಾಥ ಜಾಮೀನಿಗೆ ಅರ್ಜಿ ಹಾಕದ ಹಿನ್ನೆಲೆಯಲ್ಲಿ ಆತನಿಗೆ ಬೇಲ್ ಸಿಕ್ಕಿಲ್ಲ. ಪ್ರತಿಯೊಬ್ಬರಿಂದ 50 ಸಾವಿರ ರೂ. ಬೆಲೆಯ ಬಾಂಡ್ ಹಾಗೂ ಒಬ್ಬ ಶ್ಯೂರಿಟಿ ಪಡೆದು ನ್ಯಾಯಾಲಯ ಜಾಮೀನು ನೀಡಿದೆ. ಇನ್ನೂ, ಇದೇ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಆರೋಪಿಗಳಿಗೂ ಸಹ ಜಾಮೀನು ಮಂಜೂರಾಗಿದೆ.


2014 ರ ಆಗಸ್ಟ್ 28 ರಂದು ದಲಿತರು ಹಾಗೂ ಸವರ್ಣಿಯರ ನಡುವೆ ಗಲಾಟೆ ನಡೆದಿತ್ತು. ಇದೆ ಅಕ್ಟೋಬರ್ 28 ರಂದು ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಜೀವಾವಧಿ ಶಿಕ್ಷೆ ಘೋಷಣೆ ಮಾಡಿತ್ತು. ತೀರ್ಪು ಪ್ರಶ್ನಿಸಿ ಅಪರಾಧಿಗಳು ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು (ನ.13) ಹೈಕೋರ್ಟ್ ದ್ವೀಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ಜಮೀನು ನೀಡಿದೆ.

Join Whatsapp
Exit mobile version