ಕೊಪ್ಪಳ: PFI ಜಿಲ್ಲಾಧ್ಯಕ್ಷನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

Prasthutha|

ಕೊಪ್ಪಳ: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎಸ್ ಡಿಪಿಐ, ಪಿಎಫ್ ಐ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದ್ದು, ಈ ನಡುವೆ ಕರ್ನಾಟಕದ ಕೊಪ್ಪಳ ಜಿಲ್ಲೆಯ ಪಿಎಫ್ ಐ ಜಿಲ್ಲಾಧ್ಯಕ್ಷರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -


ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಗಂಗಾವತಿ ನಗರದಲ್ಲಿರುವ ಪಿಎಫ್ ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಝ್ ರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಎಸ್ ಪಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಅಬ್ದುಲ್ ಫೈಯಾಝ್ ರನ್ನು ಬಂಧಿಸಿ ನಂತರ ಗಂಗಾವತಿಯಿಂದ ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp