Home ಟಾಪ್ ಸುದ್ದಿಗಳು ಕೊಪ್ಪಳ: PFI ಜಿಲ್ಲಾಧ್ಯಕ್ಷನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

ಕೊಪ್ಪಳ: PFI ಜಿಲ್ಲಾಧ್ಯಕ್ಷನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

ಕೊಪ್ಪಳ: ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎಸ್ ಡಿಪಿಐ, ಪಿಎಫ್ ಐ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದ್ದು, ಈ ನಡುವೆ ಕರ್ನಾಟಕದ ಕೊಪ್ಪಳ ಜಿಲ್ಲೆಯ ಪಿಎಫ್ ಐ ಜಿಲ್ಲಾಧ್ಯಕ್ಷರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಗಂಗಾವತಿ ನಗರದಲ್ಲಿರುವ ಪಿಎಫ್ ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಝ್ ರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಎಸ್ ಪಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಅಬ್ದುಲ್ ಫೈಯಾಝ್ ರನ್ನು ಬಂಧಿಸಿ ನಂತರ ಗಂಗಾವತಿಯಿಂದ ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version