Home ಟಾಪ್ ಸುದ್ದಿಗಳು ‘ಕೊರಗಜ್ಜ’ ಸಿನಿಮಾ ಶೂಟಿಂಗ್ ವೇಳೆ ಬಿಜೆಪಿಗರಿಂದ ಗೂಂಡಾಗಿರಿ: ಚಿತ್ರೀಕರಣ ಸ್ಥಗಿತಗೊಳಿಸಿದ ತಂಡ

‘ಕೊರಗಜ್ಜ’ ಸಿನಿಮಾ ಶೂಟಿಂಗ್ ವೇಳೆ ಬಿಜೆಪಿಗರಿಂದ ಗೂಂಡಾಗಿರಿ: ಚಿತ್ರೀಕರಣ ಸ್ಥಗಿತಗೊಳಿಸಿದ ತಂಡ

ಚಿಕ್ಕಮಗಳೂರು: ಕುದುರೆಮುಖ ಸಮೀಪದ ಕಳಸದಲ್ಲಿ ‘ಕೊರಗಜ್ಜ’ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಬಿಜೆಪಿಯ ಗೂಂಡಾಗಳು ದಾಳಿ ಮಾಡಿದ್ದಾರೆ.


ಇದರಿಂದ ಚಿತ್ರಕ್ಕೆ ಹಿನ್ನಡೆ ಆಗಿದೆ. ಖ್ಯಾತ ಬಾಲಿವುಡ್ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ, ನಟಿ ಶುಭಾ ಪೂಂಜ ಮೊದಲಾದವರು ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ. ಆದರೆ, ಸಿನಿಮಾ ಸೆಟ್ ನಾಶವಾಗಿದೆ.

ಘಟನೆ ಬಗ್ಗೆ ನಿರ್ದೇಶಕ ಸುಧೀರ್ ಅತ್ತಾವರ ಮಾತನಾಡಿದ್ದು, ಇದು ಮನಸ್ಸಿಗೆ ಅತ್ಯಂತ ನೋವು ಉಂಟು ಮಾಡಿದ ಘಟನೆ. ಯಾವುದೋ ಉದ್ದೇಶದಿಂದ ಯುವಕರು ಅಸಭ್ಯ ವರ್ತನೆ ಮಾಡಿದ್ರು. ಇದರಿಂದ ಚಿತ್ರಿಕರಣವನ್ನೇ ನಿಲ್ಲಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಯಿತು. ಹಾಡಿನ ಚಿತ್ರೀಕರಣಕ್ಕಾಗಿ 50 ಜನ ಕಲಾವಿದರು, ಖ್ಯಾತ ಕೊರಿಯೋಗ್ರಾಫರ್ ಗಣೇಶ ಆಚಾರ್ಯ ಕೂಡ ಇದ್ದರು. ಬಿಜೆಪಿ ಪಕ್ಷದ ಸಾಗರ ಘಟಕವೆಂದು ಹೇಳಿಕೊಂಡು ಕೆಲ ಯುವಕರು ಅಸಭ್ಯ ವರ್ತನೆ ಮಾಡಿದ್ರು ಎಂದು ಹೇಳಿದ್ದಾರೆ.

Join Whatsapp
Exit mobile version