ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಗಾಗಿ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಲಾಗಿದೆ : ಕೋಟ ಶ್ರೀನಿವಾಸ್ ಪೂಜಾರಿ

Prasthutha|

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಾವಳಿಗಳನ್ನು ಕೊಂಚ ಸಡಿಲಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಲ್ಲಿ ಮನವಿ ಮಾಡಲಾಗಿದೆ. ಈ ಕುರಿತು ಇಂದು ಅಥವಾ ನಾಳೆ ಅಧಿಕೃತ ಆದೇಶ ಜಾರಿಯಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

- Advertisement -

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಐದು ಶೇಕಾಡಾಕ್ಕಿಂತ ಕೆಳಗೆ ಬಂದಿದೆ. ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ವರೆಗೆ ಲಾಕ್ ಡೌನ್ ಸಡಿಲಿಕೆಗೆ ಅವಕಾಶ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದೇವೆ. ಸರಕಾರ ಆದೇಶ ನೀಡಿದ್ರೆ ನಾಳೆಯಿಂದಲೇ ಸಂಜೆ ಐದು ಗಂಟೆಯ ವರೆಗೆ ಅನ್ ಲಾಕ್ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.



Join Whatsapp