ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ರದ್ದು

Prasthutha|

ಚಿಕ್ಕಮಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರ ಜೊತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆಯೂ ಭುಗಿಲೆದ್ದಿದೆ.
ಚಿಕ್ಕಮಗಳೂರು ಬಿಜೆಪಿಯಲ್ಲೂ ಅಸಮಾಧಾನ ಸ್ಫೋಟಗೊಂಡಿದ್ದು, ಇದರಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರ್ಯಕ್ರಮ ದಿಢೀರ್ ರದ್ದುಗೊಂಡಿದೆ.

- Advertisement -

ನಿಗದಿಯಂತೆ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಚಿಕ್ಕಮಗಳೂರಿನಲ್ಲಿ ಪ್ರಚಾರ ಕಾರ್ಯ ಆರಂಭಿಸಬೇಕಿತ್ತು. ಹೀಗಾಗಿ ಮೂಡಿಗೆರೆ ತಾಲೂಕಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾಗಬೇಕಿತ್ತು. ಆದರೆ ಪದಗ್ರಹಣ ಕಾರ್ಯಕ್ರಮಕ್ಕೆ ಪರ್ಯಾಯವಾಗಿ ಸ್ವಾಭಿಮಾನಿ ಸಮಾವೇಶ ಆಯೋಜನೆ ಮಾಡಿದ್ದರಿಂದ ಗೊಂದಲ ಉಂಟಾಗಿದೆ.


ಮೂಡಿಗೆರೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದಲೇ ಬಿಜೆಪಿ ಸ್ವಾಭಿಮಾನಿ ಸಮಾವೇಶ ಆಯೋಜನೆ ಮಾಡಿದ್ದು, ಇದರಿಂದ ಮೂಡಿಗೆರೆ ಬಿಜೆಪಿ ಕಚೇರಿಯಲ್ಲಿ ನಡೆಯಬೇಕಿದ್ದ ಪದಗ್ರಹಣ ಕಾರ್ಯಕ್ರಮ ರದ್ದುಗೊಂಡಿದೆ.

- Advertisement -

ಮೂಡಿಗೆರೆ ತಾಲೂಕು ಮಂಡಲ ಅಧ್ಯಕ್ಷ ಸ್ಥಾನದ ವಿಚಾರವಾಗಿ ಹೊಡೆದಾಟ ನಡೆದಿದ್ದು, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ರತನ್ ಹಾಗೂ ಅನು ಕುಮಾರ್ ಬಣಗಳ ನಡುವೆ ಗಲಾಟೆ ಆಗಿತ್ತು.
ಮೂಡಿಗೆರೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡ ಕಾರಣ ಇದರ ಎಫೆಕ್ಟ್ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ತಾಗಿ ಕಾರ್ಯಕ್ರಮ ರದ್ದುಗೊಂಡಿದೆ.

Join Whatsapp