ಕೋಟ ಠಾಣೆ ಪಿಎಸ್ಸೈ ಅಮಾನತು, ಐವರು ಪೊಲೀಸರ ಸ್ಥಳಾಂತರ

Prasthutha|

ಕೊರಗರ ಮನೆಯ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್ ದೌರ್ಜನ್ಯ ಪ್ರಕರಣ

- Advertisement -

ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ‌. ಅವರನ್ನು ಅಮಾನತುಗೊಳಿಸಿ ಐವರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.

ಬ್ರಹ್ಮಾವರ ತಾಲೂಕಿನ ಕೋಟತಟ್ಟು ಬಾರಿಕೆರೆ ಕೊರಗ ಕಾಲನಿಯಲ್ಲಿ ಸೋಮವಾರ ರಾತ್ರಿ ನಡೆಯುತ್ತಿದ್ದ ಕೊರಗ ಸಮುದಾಯದ ರಾಜೇಶ್ ಎನ್ನುವವರ ಮೆಹಂದಿ ಕಾರ್ಯಕ್ರಮದ ವೇಳೆ ಸಾರ್ವಜನಿಕರೊಬ್ಬರು ನೀಡಿದ ದೂರಿನಂತೆ ಆಗಮಿಸಿದ ಕೋಟ ಪೊಲೀಸರು, ಅಲ್ಲಿ ನೆರೆದಿದ್ದವರ ಮೇಲೆ ಲಾಠಿ ಪ್ರಹಾರ ನಡೆಸಿ, ದೌರ್ಜನ್ಯ ಎಸಗಿದ ಬಗ್ಗೆ ವರದಿಯಾಗಿತ್ತು.

- Advertisement -

“ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯ ಆಧಾರದಲ್ಲಿ ತಾನು ನೀಡಿದ ವರದಿಯನ್ನು ಪರಿಶೀಲಿಸಿದ ಪಶ್ಚಿಮ ವಲಯ ಐಜಿಪಿಯವರು ಕೋಟ ಪಿಎಸ್ಐ ಅವರನ್ನು ಅಮಾನತು ಮಾಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಐದು ಮಂದಿ ಪೊಲೀಸ್ ಸಿಬ್ಬಂದಿಯನ್ನು ಕೋಟ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ” ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.

Join Whatsapp