ಹೋಮ್ ಐಸೋಲೇಷನ್ ನಲ್ಲಿ ಇರುವವರಿಗೆ ವೈದ್ಯಕೀಯ ಕಿಟ್ ವಿತರಿಸಲು ಕೋಟ ಸೂಚನೆ

Prasthutha|

ಕೊಡಗು: ಹೋಮ್ ಐಸೋಲೇಷನ್ ನಲ್ಲಿ ಇರುವವರಿಗೆ ವೈದ್ಯಕೀಯ ಕಿಟ್ ವಿತರಿಸಲು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

- Advertisement -

ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ಕೋವಿಡ್-19 ಪಾಸಿಟಿವಿಟಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜೊತೆಗೆ ಹೋಮ್ ಐಸೋಲೇಷನ್ ನಲ್ಲಿ ಇರುವವರಿಗೆ ವೈದ್ಯಕೀಯ ಕಿಟ್ ವಿತರಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.  

ಕೋವಿಡ್-19 ನಿಯಂತ್ರಣ ಸಂಬಂಧಿಸಿದಂತೆ ವಿಡಿಯೋ ಸಂವಾದ ಮೂಲಕ ಮಾಹಿತಿ ಪಡೆದು ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಎಲ್ಲಾ ಹಂತದ ಅಧಿಕಾರಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು. ಗ್ರಾ.ಪಂ.ಮಟ್ಟದಲ್ಲಿ ಕಾರ್ಯಪಡೆಯನ್ನು ಕ್ರಿಯಾಶೀಲಗೊಳಿಸಬೇಕು. ಗ್ರಾಮ, ಶಾಲಾ, ಕಾಲೇಜುಗಳಿಗೆ  ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು.   



Join Whatsapp