ಕೊಟ್ಟಿಗೆಹಾರ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಮೂವರಿಗೆ ಗಾಯ

Prasthutha|

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ  ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು  ಕಂದಕಕ್ಕೆ ಉರುಳಿ‌ ಬಿದ್ದ ಘಟನೆ   ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನೆಡೆದಿದೆ.

- Advertisement -

ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವಾಗ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರಿಗೆ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.



Join Whatsapp