ಕೋವಿಡ್ ಸೋಂಕು ಗ್ರಾಮೀಣ ಪ್ರದೇಶದಲ್ಲಿ ಏರಿಕೆಯಾಗಲಿದೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ!

Prasthutha|

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ತೀವ್ರಗತಿಯ ಹೆಚ್ಚಳ ಕಂಡುಬರುತ್ತಿದ್ದು, ಮುಂಬರುವ ದಿನಗಳಲ್ಲಿ ಗ್ರಾಮೀಣಾ ಪ್ರದೇಶಗಳಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಬಹುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬಹುಶಃ 2-3 ವಾರಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬರಬಹುದು. ಆದರೆ ಗ್ರಾಮೀಣ ಪ್ರದೇಶದಲ್ಲಿ ಏರಿಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ವಿಸ್ತೃತ ಸಮಾಲೋಚನೆ ಮಾಡಿದ್ದೇವೆ. ಗ್ರಾಮೀಣಾ ಪ್ರದೇಶದಲ್ಲಿ ಸೋಂಕು ಹೆಚ್ಚಾಗದಂತೆ ಸಿದ್ಧತೆ ನಡೆಸಲು ಆದೇಶಿಸಿದ್ದೇವೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ತಿಳಿಸಿದ್ದಾರೆ.

- Advertisement -

ದೊಡ್ಡ ನಗರಗಳಲ್ಲಿ ಇಷ್ಟು ಆರೋಗ್ಯ ವ್ಯವಸ್ಥೆ ಇದ್ದರೂ ಐಸಿಯು, ವೆಂಟಿಲೇಟರ್ ಕೊರತೆ ಉಂಟಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಪ್ರತ್ಯೇಕ ನಿಗಾ ವಹಿಸಿಕೊಂಡು ಸರಿಯಾದ ಚಿಕಿತ್ಸೆ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

- Advertisement -