ಬಿಜೆಪಿಗೆ ಬಿಗ್ ಶಾಕ್: ಎಂಎಲ್ ಸಿ ಸ್ಥಾನಕ್ಕೆ ಕೆಪಿ ನಂಜುಂಡಿ ರಾಜೀನಾಮೆ: ನಾಳೆ ಕಾಂಗ್ರೆಸ್ ಸೇರ್ಪಡೆ

Prasthutha|

ಹುಬ್ಬಳ್ಳಿ: ಲೋಕಸಭೆ ಚುನಾವಣೆಯ ಸಮಯದಲ್ಲೇ ವಿಧಾನಪರಿಷತ್ ಸದಸ್ಯ ಕೆಪಿ ನಂಜುಂಡಿ ರಾಜ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

- Advertisement -

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆರೋಪಿಸಿದರು.

Join Whatsapp