ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ

Prasthutha|

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನರಾಗಿದ್ದಾರೆ.

- Advertisement -

ಧ್ರುವ ನಾರಾಯಣ್‌ (62) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದಾರೆ.

1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

- Advertisement -

Join Whatsapp