Home ಟಾಪ್ ಸುದ್ದಿಗಳು ಹಿಜಾಬ್ ಕುರಿತು ಶಾಸಕ ಝಮೀರ್ ಅಹ್ಮದ್ ಹೇಳಿಕೆಗೆ ನೋಟಿಸ್ ನೀಡಿದ ಕೆಪಿಸಿಸಿ

ಹಿಜಾಬ್ ಕುರಿತು ಶಾಸಕ ಝಮೀರ್ ಅಹ್ಮದ್ ಹೇಳಿಕೆಗೆ ನೋಟಿಸ್ ನೀಡಿದ ಕೆಪಿಸಿಸಿ

ಬೆಂಗಳೂರು: ಹಿಜಾಬ್ ಗೆ ಸಂಬಂಧಿಸಿದಂತೆ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸೂಚನೆಯನ್ನು ದಿಕ್ಕರಿಸಿದ ಶಾಸಕ ಝಮೀರ್ ಅಹ್ಮದ್ ಖಾನ್ ಅವರ ನಡೆಯನ್ನು ವಿರೋಧಿಸಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ.ರಹ್ಮಾನ್ ಖಾನ್ ನೋಟಿಸ್ ಜಾರಿಗೊಳಿಸಿದ್ದಾರೆ.

ಹಿಜಾಬ್ ಕುರಿತಂತೆ ಪಕ್ಷದ ಮುಖಂಡರು ಬಹಿರಂಗ ಹೇಳಿಕೆ ನೀಡಬಾರದು ಎಂದು ಈ ಹಿಂದೆಯೇ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದರು. ಇದರ ಹೊರತಾಗಿ ಶಾಸಕ ಝಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ವಿವಾದ ಪಡೆದುಕೊಂಡಿದ್ದು, ಕಾಂಗ್ರೆಸ್ ಅವರ ಹೇಳಿಕೆಯನ್ನು ಸಮರ್ಥಿಸುವುದಿಲ್ಲ. ಈ ನಿಟ್ಟಿನಲ್ಲಿ ತಮ್ಮ ಹೇಳಿಕೆಯನ್ನು ಹಿಂಪಡೆದು, ಕ್ಷಮೆಯಾಚಿಸಬೇಕೆಂದು ಡಿ.ಕೆ. ಶಿವಕುಮಾರ್ ಸೂಚಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಝಮೀರ್ ಅಹ್ಮದ್, ನಾನು ಹಿಂಪಡೆಯುವಂತಹ ಅಥವಾ ಕ್ಷಮೆಯಾಚಿಸುವಂತಹ ಹೇಳಿಕೆ ನೀಡಿಲ್ಲ. ಈ ನಿಟ್ಟಿನಲ್ಲಿ ಕ್ಷಮೆಯಾಚಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ. ಇನ್ನು ಮುಂದೆಯೂ ಹಿಜಾಬ್ ಕುರಿತು ಮಾತನಾಡುತ್ತೇನೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸ್ಪಷ್ಠೀಕರಣ ನೀಡುವಂತೆ ಕೋರಿ ನೋಟಿಸ್ ಜಾರಿಗೊಳಿಸಿದೆ ಎಂದು ಹೇಳಲಾಗಿದೆ.

Join Whatsapp
Exit mobile version