“ನಳಿನ್ ಕುಮಾರ್ ಕಟೀಲ್ ಮಂಗಳೂರಿನ ಮಹಿಳೆಯ ಜೊತೆ ಅಕ್ರಮ ಸಂಬಂಧವಿದೆ” : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗಂಭೀರ ಆರೋಪ

Prasthutha|

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆಡಿರುವ ವಿವಾದಾತ್ಮಕ ಹೇಳಿಕೆಗೆ ರಾಜ್ಯಾದ್ಯಂತ ತೀಕ್ಷ್ಣ  ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

- Advertisement -

ಈ ಮಧ್ಯೆ ಕೆಪಿಸಿಸಿ ರಾಜ್ಯ ವಕ್ತಾರ ಎಂ ಲಕ್ಷ್ಮಣ್ ಬುಧವಾರ ನಳಿನ್ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ್ ಅವರು,  ನಳಿನ್ ಕುಮಾರ್ ಕಟೀಲ್ ಗೆ ಮಂಗಳೂರಿನ ಮಹಿಳೆಯೊಬ್ಬರ ಜೊತೆಗೆ ಅಕ್ರಮ ಸಂಬಂಧವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಾತ್ರವಲ್ಲ 2014 ರಲ್ಲಿ ಆ ಮಹಿಳೆಯ ಪತಿಯನ್ನು ನಳಿನ್ ಅವರು ಬ್ಲಾಕ್ಮೇಲ್ ಕೂಡಾ ಮಾಡಿದ್ದರು ಎಂದು ಹೇಳಿದ್ದಾರೆ.

ನಳಿನ್ ವಿರುದ್ಧ ಆರೋಪಗಳ ಸುರಿಮಳೆಗೈದ ಲಕ್ಷ್ಮಣ್ ಅವರು, ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗಾ ಅವರನ್ನು ಕೊಲೆಗೈದ ಪ್ರಮುಖ ಆರೋಪಿ ನರೇಶ್ ಶೆಣೈ, ನಳಿನ್ ಅವರ ಖಾಸಾ ಗೆಳೆಯ ಎಂದು ಹೇಳಿದ್ದಾರೆ. ಆ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದಾರೆ

Join Whatsapp