Home ಟಾಪ್ ಸುದ್ದಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ನಿಂದ ವಾರೆಂಟ್ ಜಾರಿ !

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ನಿಂದ ವಾರೆಂಟ್ ಜಾರಿ !

ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನೋಟಿಸ್ ನೀಡಿದೆ.

ಮಾಧ್ಯಮದೊಂದಿಗೆ ಮಾತನಾಡಿರುವ ಡಿ.ಕೆ. ಶಿವಕುಮಾರ್, ಕೊರೊನಾ ನಿಯಮ ಉಲ್ಲಂಘನಡೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಪೆಟ್ರೋಲ್, ಡೀಸೆಲ್ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ವಾರೆಂಟ್ ಜಾರಿ ಮಾಡಿದ್ದು, ಕೋರ್ಟ್ ಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 13 ರಂದು ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ 36 ಜನರು ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Join Whatsapp
Exit mobile version