ಸಿದ್ದರಾಮೋತ್ಸವ ಪೂರ್ವಭಾವಿ ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಗೈರು

Prasthutha|

ಬೆಂಗಳೂರು: ಇಂದು ಸಿದ್ಧರಾಮೋತ್ಸವ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಸೇರಿದಂತೆ ವಿವಿಧ ಕಾರ್ಯಕರ್ತರಿಗೆ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಈ ಮಹತ್ವದ ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಗೈರು ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಶಿವಕುಮಾರೋತ್ಸವ ಆಚರಿಸುವ ಉದ್ದೇಶ ಇದೆಯಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್, ತಾನು ಕಾಂಗ್ರೆಸೋತ್ಸವ ಮಾಡುತ್ತೇನೆಂದ ಮಾತು ಸಿದ್ದರಾಮಯ್ಯರಿಗೆ ಟಾಂಗ್ ಎಂದು ವಿಶೇಷಿಸಲಾಗುತ್ತಿರುವ ಮಧ್ಯೆ ಇಂದಿನ ಕಾರ್ಯಕ್ರಮಕ್ಕೆ ಡಿಕೆಶಿ ಗೈರು ಅಂತೂ ಗಮನ ಸೆಳೆದಿದೆ ಎನ್ನಲಾಗಿದೆ.



Join Whatsapp