ಕೆಪಿಸಿಸಿ ವಕ್ತಾರರಾಗಿದ್ದ ಜಾಫರ್ ಮೊಹಿಯುದ್ದೀನ್ AAP ಸೇರ್ಪಡೆ

Prasthutha|

ಬೆಂಗಳೂರು: ಸಾಮಾಜಿಕ ಹೋರಾಟಗಾರ ಹಾಗೂ ಮಾಜಿ ಕೆಪಿಸಿಸಿ ವಕ್ತಾರ ಜಾಫರ್ ಮೊಹಿಯುದ್ದೀನ್ ಅವರು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ  ಸಮ್ಮುಖದಲ್ಲಿ ಶುಕ್ರವಾರ ಎಎಪಿಗೆ ಸೇರ್ಪಡೆಯಾದರು.

- Advertisement -

ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “ರಾಯಚೂರು ಮೂಲದವರಾದ ಜಾಫರ್ ಮೊಹಿಯುದ್ದೀನ್ರವರು ಎಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿದ್ದಾಗಲೇ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತುತ್ತಿದ್ದರು. ಇವರು ಭಾರತೀಯ ವಾಯುಪಡೆಯಲ್ಲಿ ಡೆಪ್ಯುಟಿ ಆರ್ಕಿಟೆಕ್ಟ್ ಆಗಿ ಸುಮಾರು ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 1997ರಲ್ಲಿ ರಾಯಚೂರಿನಲ್ಲಿ ಜಾಫರ್ ಅಸೋಸಿಯೇಟ್ಸ್ ಎಂಬ ಸ್ವಂತ ಸಂಸ್ಥೆ ಕಟ್ಟಿದ್ದಾರೆ. ಕತ್ಪುಟ್ಲಿಯಾನ್ ಥಿಯೇಟರ್ ಗ್ರೂಪ್ ಎಂಬ ಎನ್ ಜಿಒ ಅಧ್ಯಕ್ಷರಾಗಿ ರಂಗಭೂಮಿ, ಕಲೆ, ಸಂಗೀತವನ್ನು ಪ್ರೋತ್ಸಾಹಿಸುತ್ತಿದ್ದಾರೆ. ಫುವಾಕ್ ಎಂಬ ಎನ್ ಜಿಒ ಅಧ್ಯಕ್ಷರಾಗಿ ಉರ್ದು ಲೇಖಕರು ಹಾಗೂ ಕಲಾವಿದರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಿದ್ದಾರೆ” ಎಂದು ಪರಿಚಯಿಸಿದರು.

ಜಾಫೆರ್ ಮೊಹಿಯುದ್ದೀನ್ ಮಾತನಾಡಿ, “ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಕ್ಷೇತ್ರದ ಸುಧಾರಣೆಯಲ್ಲಿ ಆಮ್ ಆದ್ಮಿ ಪಾರ್ಟಿಗಿರುವ ಬದ್ಧತೆ ಪ್ರಶಂಸನೀಯ ಎಂದು ಹೇಳಿದರು.

- Advertisement -

ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ, ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹಾಗೂ ಇತರೆ ಮುಖಂಡರು, ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಿದ್ದರು.

Join Whatsapp