ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್​. ಸುದರ್ಶನ್​ ರಾಜೀನಾಮೆ

Prasthutha|

- Advertisement -

ಬೆಂಗಳೂರು : ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್.ಸುದರ್ಶನ್​ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಗೆ ಕಳುಹಿಸಿದ್ದಾರೆ.

- Advertisement -

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪರವಾಗಿ ಪ್ರಚಾರ ಮಾಡಲು ಸುದರ್ಶನ್ ಅವರು ತಮ್ಮ ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಇನ್ ಚಾರ್ಜ್ ಸೆಕ್ರೆಟರಿ, ಜಂಟಿ ಕಾರ್ಯದರ್ಶಿ, ಪ್ರದೇಶ ಕಮಿಟಿ ಅಧ್ಯಕ್ಷರು, ಕಾಂಗ್ರೆಸ್ ಲೆಜಿಸ್ಲೇಟೀವ್ ಪಾರ್ಟಿ , ಪ್ರಮುಖ ಜವಾಬ್ದಾರಿ ಹೊತ್ತಿರುವ ಪಕ್ಷದ ನಾಯಕರು ಅಭ್ಯರ್ಥಿಗಳ ಪ್ರಚಾರ ಮಾಡುವಂತಿಲ್ಲ. ಒಂದು ವೇಳೆ ಪ್ರಚಾರ ಮಾಡಬೇಕು ಎಂದಿದ್ದರೆ, ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ ಪ್ರಚಾರದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.



Join Whatsapp