Home ಟಾಪ್ ಸುದ್ದಿಗಳು ಸಿಎಂ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ: ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕೆಪಿಸಿಸಿ ಸೂಚನೆ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ: ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕೆಪಿಸಿಸಿ ಸೂಚನೆ

ಬೆಂಗಳೂರು: ಮುಡಾ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಹೀಗಾಗಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸೂಚನೆ ನೀಡಿದೆ.


ಸದ್ಯ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಖಂಡಿಸಿ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಇದೀಗ ಕೆಪಿಸಿಸಿ ಕೂಡ ರಾಜ್ಯಾದ್ಯಂತ ಪ್ರತಿಭಟಿಸಲು ಮುಂದಾಗಿದ್ದು, ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲು ಸೂಚಿಸಲಾಗಿದೆ.


ಪ್ರಾಸಿಕ್ಯೂಷನ್ ಸಂಬಂಧ ಎಐಸಿಸಿ ನಾಯಕರು ಕೂಡ ಸಿಎಂ ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಉಸ್ತುವಾರಿ ಸುರ್ಜೇವಾಲ ಕರೆ ಮಾಡಿದ್ದು, ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದಾರೆ. ನಿಮ್ಮ ಜತೆ ನಾವಿದ್ದೇವೆ, ಧೈರ್ಯವಾಗಿರಿ. ಏನೇ ಆದರೂ ಕಾನೂನು ಹೋರಾಟ ನಡೆಸೋಣ ಅಂತ ಹೇಳೋ ಮೂಲಕ ರಾಜ್ಯವ್ಯಾಪಿ ಸಮರಕ್ಕೆ ರಣಕಹಳೆ ಮೊಳಗಿಸುವಂತೆ ಸೂಚನೆ ಕೊಟ್ಟಿದ್ದಾರೆ.

Join Whatsapp
Exit mobile version