Home ಟಾಪ್ ಸುದ್ದಿಗಳು ಬಿಜೆಪಿ ದುರಾಡಳಿತ, ಜೆಡಿಎಸ್‌ ಕಿತ್ತಾಟದಿಂದ ಕಾಂಗ್ರೆಸ್ ಗೆ ಜನಬೆಂಬಲ: ಕೆಪಿಸಿಸಿ ಉಪಾಧ್ಯಕ್ಷ

ಬಿಜೆಪಿ ದುರಾಡಳಿತ, ಜೆಡಿಎಸ್‌ ಕಿತ್ತಾಟದಿಂದ ಕಾಂಗ್ರೆಸ್ ಗೆ ಜನಬೆಂಬಲ: ಕೆಪಿಸಿಸಿ ಉಪಾಧ್ಯಕ್ಷ

ಬೆಂಗಳೂರು: ಬಿಜೆಪಿ ದುರಾಡಳಿತ ಹಾಗೂ ಜೆಡಿಎಸ್‌ ಪಕ್ಷದಲ್ಲಿನ ಕಿತ್ತಾಟದಿಂದ ಬೇಸತ್ತಿರುವ ಮತದಾರರು ಕಾಂಗ್ರೆಸ್‌ ಪಕ್ಷವನ್ನು ಜನರು ಬೆಂಬಲಿಸುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹೇಳಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಮತದಾರರು ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ವಿಧಾನಸಭೆ ಚುನಾವಣೆಗೆ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ ಎಂದು ಹೇಳಿದ್ದಾರೆ.

ಈಗಾಗಲೇ ಬಿಜೆಪಿ ದುರಾಡಳಿತ ಹಾಗೂ ಜೆಡಿಎಸ್‌ ಪಕ್ಷದಲ್ಲಿನ ಕಿತ್ತಾಟದಿಂದ ಬೇಸತ್ತಿರುವ ಮತದಾರರು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬುವುದಕ್ಕೆ ವಿಧಾನ ಪರಿಷತ್‌ ಚುನಾವಣೆಗಳೇ ಸಾಕ್ಷಿಯಾಗಿವೆ ಎಂದು ಕೂಡಾ ಅವರು ಹೇಳಿದ್ದಾರೆ.

Join Whatsapp
Exit mobile version