ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ: ಕೃಷ್ಣಭೈರೇಗೌಡ

Prasthutha|

ಬೆಂಗಳೂರು: ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಆದರೆ ರೈತರಿಗಾಗುತ್ತಿರುವ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

- Advertisement -


ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ತುಳಿಸಿ ಮುನಿರಾಜುಗೌಡ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಜಮೀನಿನ ಮೌಲ್ಯ ಪರಿಷ್ಕರಣೆ ನಡೆಸಿ ಕನಿಷ್ಟ ನಾಲ್ಕು ವರ್ಷವಾಗಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಜಮೀನು ಮೌಲ್ಯ ಪರಿಷ್ಕರಣೆ ನಡೆಸಲಾಗುವುದು ಎಂದಿದ್ದಾರೆ.