ಶಾಹಿ ಈದ್ಗಾ ಮಸೀದಿ ತೆರವು ಕೋರಿ ಅರ್ಜಿ ಸಲ್ಲಿಸಲು ಮಥುರಾ ಕೋರ್ಟ್ ಒಪ್ಪಿಗೆ

Prasthutha|

ಲಖನೌ: ಮಥುರಾದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲು ಉತ್ತರ ಪ್ರದೇಶದ ಸಿವಿಲ್ ನ್ಯಾಯಾಲಯವು ಒಪ್ಪಿಗೆ ಸೂಚಿಸಿದೆ.

- Advertisement -

ಇದರೊಂದಿಗೆ ಸೆಪ್ಟೆಂಬರ್ 2020 ರಲ್ಲಿ ಹೂಡಲಾಗಿದ್ದ ಮೊಕದ್ದಮೆಯನ್ನು ವಜಾಗೊಳಿಸಿ ಸಿವಿಲ್ ಕೋರ್ಟ್ ನೀಡಿದ ಆದೇಶವನ್ನು ಸೆಷನ್ ನ್ಯಾಯಾಲಯ ರದ್ದುಗೊಳಿಸಿದೆ.

17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆರವುಗೊಳಿಸುವಂತೆ ಆಗ್ರಹಿಸಿ ಸಂಘಪರಿವಾರ ಹೂಡಿದ ದಾವೆ ಇದಾಗಿದ್ದು, ಮಸೀದಿಯನ್ನು ಕೃಷ್ಣ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು.

- Advertisement -

ಮಥುರಾದ ಶಾಹಿ ಈದ್ಗಾ ಮಸೀದಿಯು ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿದೆ ಎಂಬುದು ಗಮನಾರ್ಹ.

ಈ ಮಧ್ಯೆ ಸೆಪ್ಟೆಂಬರ್ 30, 2020 ರಂದು ಮಥುರಾದ ಸಿವಿಲ್ ಕೋರ್ಟ್ ಈದ್ಗಾ ಮಸೀದಿಯನ್ನು ತೆರವುಗೊಳಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದರ ವಿರುದ್ಧ ಅಕ್ಟೋಬರ್ 16, 2020 ಮಥುರಾ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ಅಂಗೀಕರಿಸಿತ್ತು.

Join Whatsapp