ಕೃಷ್ಣಾ ಜಲ ವಿವಾದ: ಐತೀರ್ಪು ಗೆಜೆಟ್ ಪ್ರಕಟ ಕುರಿತು ಇದೇ 29ರಂದು ಸುಪ್ರೀಂಕೋರ್ಟ್ ವಿಚಾರಣೆ

Prasthutha: November 8, 2021

ನವದೆಹಲಿ : ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣವು 29.11.2013ರಂದು ಅಂತಿಮವಾಗಿ ನೀಡಿರುವ ಐತೀರ್ಪನ್ನು ಕೇಂದ್ರ ಸರ್ಕಾರದ ಗೆಜೆಟ್ ನಲ್ಲಿ ಪ್ರಕಟಿಸಬೇಕೆಂದು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಸಲ್ಲಿಸಿರುವ ಮಧ್ಯಕಾಲೀನ ಅರ್ಜಿಗಳನ್ನು ಇದೇ ತಿಂಗಳ 29ರಂದು ನ್ಯಾಯಾಲಯದ ಕಲಾಪ ಪಟ್ಟಿಯಲ್ಲಿ ಸೇರಿಸಬೇಕೆಂದು ಸರ್ವೋಚ್ಛ ನ್ಯಾಯಾಲಯದ ದ್ವಿಸದಸ್ಯಪೀಠ ಇಂದು ಆದೇಶಿಸಿದೆ.
ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ವೈ.ವಿ.ಚಂದ್ರಚೂಡ್ ಅವರಿದ್ದ ಪೀಠ ಈ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡುವಂತೆ ತೆಲಂಗಾಣ ಮತ್ತು ಆಂಧ್ರ ರಾಜ್ಯಗಳು ಮಾಡಿದ ಮನವಿಯನ್ನು ಪುರಸ್ಕರಿಸಲಾಯಿತು.


ಆದರೆ ಕರ್ನಾಟಕದ ಪರವಾಗಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಶ್ಯಾಮ್ ದಿವಾನ್ ಅವರು ನ್ಯಾಯಾಧಿಕರಣದ ಐತೀರ್ಪಿನ ನಂತರ ಕರ್ನಾಟಕವು 13 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿ 1205 ಕಿ.ಮೀ. ಉದ್ದದ ಕಾಲುವೆ ಸರಪಳಿಯನ್ನು ನಿರ್ಮಿಸಿ ಕೊಂಡಿದೆ. ಈ ಕಾಲುವೆಗಳಿಗೆ ಹರಿಯಬೇಕಾದ ನೀರು ಬಂಗಾಳಕೊಲ್ಲಿಗೆ ವ್ಯರ್ಥವಾಗಿ ಹರಿಯುತ್ತಿದೆ. ಆದ್ದರಿಂದ ಈ ಪ್ರಕರಣದ ವಿಚಾರಣೆ ಅತ್ಯಂತ ತುರ್ತಾಗಿ ನಡೆಯಬೇಕಾಗಿದೆ. ಗೆಜೆಟ್ ಪ್ರಕಟಣೆಗೆ ಮಹತ್ವದ ವಿಷಯವಾಗಿದೆ. ಎರಡು ವಾರಗಳ ನಂತರ ಇದನ್ನು ಪಟ್ಟಿಮಾಡಬೇಕು. ಕರ್ನಾಟಕವು ಗೆಜೆಟ್ ಪ್ರಕಟಣೆ ಕೋರಿ ಸಲ್ಲಿಸಿದ ಮಧ್ಯಕಾಲೀನ ಅರ್ಜಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕೆಂದು ಸರ್ವೋಚ್ಛ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮಹಾರಾಷ್ಟ್ರದ ನ್ಯಾಯವಾದಿಗಳು ಇದೇ ವಿಷಯವಾಗಿ ತಮ್ಮ ರಾಜ್ಯದ ಮಧ್ಯಕಾಲೀನ ಅರ್ಜಿಯನ್ನು ಸಹ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಕೋರಿದರು.


ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳ ಗೆಜೆಟ್ ಪ್ರಕಟಣೆ ಕೋರಿರುವ ಮಧ್ಯಕಾಲೀನ ಅರ್ಜಿಗಳನ್ನು 29.11.2021ರಂದು ನ್ಯಾಯಾಲಯದ ಕಲಾಪ ಪಟ್ಟಿಗೆ ಸೇರಿಸಬೇಕೆಂದು ಸರ್ವೋಚ್ಛ ನ್ಯಾಯಾಲಯವು ಆದೇಶಿಸಿತು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಈ ಪ್ರಕರಣದಲ್ಲಿ ವಾದಿಯನ್ನಾಗಿಸುವುದಕ್ಕೆ ಕರ್ನಾಟಕವು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ಮಾನ್ಯ ಮಾಡಿತು. ಪ್ರಕರಣವನ್ನು 29ಕ್ಕೆ ಮುಂದೂಡಲಾಯಿತು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!