ಮೋದಿ ಫೋಟೋ ಬಳಕೆಗೆ ಅವಕಾಶ ಸಿಕ್ಕಿದೆ: ಕೆಎಸ್ ಈಶ್ವರಪ್ಪ

Prasthutha|

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ನನ್ನ ಹೃದಯದಲ್ಲಿ ಇದ್ದಾರೆ. ಅವರ ಫೋಟೊ ನಾನು ಬಳಸಬಾರದೆಂದು ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಆದರೆ ಪ್ರಧಾನಿಯ ಫೋಟೊ ಬಳಕೆಗೆ ನನಗೆ ಅವಕಾಶ ದೊರೆತಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದರು.

- Advertisement -


ಬಿಜೆಪಿಯವರು ಕೋರ್ಟ್ ಮತ್ತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ಈಗ ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ಸಿಕ್ಕಿದೆ. ಇದರಿಂದ ಬಿಜೆಪಿಯವರಿಗೆ ಎರಡೂ ಕಡೆ ಹಿನ್ನಡೆ ಆಗಿದೆ. ನನಗೆ ಸಂತೋಷವಾಗಿದ ಎಂದು ಅವರು ಹೇಳಿದರು.

Join Whatsapp