ತಾ.ಪಂ. ರದ್ಧತಿ ಬಗ್ಗೆ ಮುಂದಿನ ಅಧಿವೇಶನದಲ್ಲಿ ನಿರ್ಧಾರ : ಈಶ್ವರಪ್ಪ

Prasthutha|

- Advertisement -

ಬೆಂಗಳೂರು :  ತಾಲ್ಲೂಕು ಪಂಚಾಯ್ತಿ ರದ್ದತಿ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಗ್ರಾಮ ಪಂಚಾಯ್ತಿಯ ನೂತನ ಸದಸ್ಯರಿಗೆ ಸಾಮಾಥ್ರ್ಯಾಭಿವೃದ್ಧಿ ಕಾರ್ಯಕ್ರಮವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ತಾಲ್ಲೂಕು ಪಂಚಾಯ್ತಿ ಉಪಯೋಗವಿಲ್ಲ ಎಂಬ ಅಭಿಪ್ರಾಯ ಎಲ್ಲರಲ್ಲೂ ವ್ಯಕ್ತವಾಗುತ್ತಿದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಗ್ರಾಪಂ ಮತ್ತು ಜಿಪಂ ಎರಡೇ ಸಾಕು ಎಂಬ ಅಭಿಪ್ರಾಯವಿದೆ. ಏಕಾಏಕಿ ತಾಪಂ ರದ್ದುಮಾಡಲು ಸಾಧ್ಯವಿಲ್ಲ. ಸಂವಿಧಾನಕ್ಕೆ ತಿದ್ದುಪಡಿ ಆಗಬೇಕಿದೆ.

- Advertisement -

ತಾಪಂ ರದ್ದತಿ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ನಂತರ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ತಾಪಂ ಹಾಗೂ ಜಿಪಂಗಳಿಗೆ ಚುನಾವಣೆ ಆಗೇ ಆಗುತ್ತದೆ. ಅವಧಿ ಮುಗಿದಿರುವ ತಾಪಂ, ಜಿಪಂಗಳಿಗೆ ಏಪ್ರಿಲ್‍ನಲ್ಲಿ ಚುನಾವಣೆ ಆಗಬಹುದು. ತಾಲ್ಲೂಕು ಪಂಚಾಯ್ತಿ ರದ್ದತಿಗೂ ಚುನಾವಣೆಗೂ ಸಂಬಂಧವಿಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

Join Whatsapp