Home ಟಾಪ್ ಸುದ್ದಿಗಳು KSRTC ಅಪಘಾತ ಪರಿಹಾರ 3 ಲಕ್ಷದಿಂದ 10 ಲಕ್ಷ ರೂ.ಗೆ ಏರಿಕೆ

KSRTC ಅಪಘಾತ ಪರಿಹಾರ 3 ಲಕ್ಷದಿಂದ 10 ಲಕ್ಷ ರೂ.ಗೆ ಏರಿಕೆ

ಸಾಂದರ್ಭಿಕ ಚಿತ್ರ(KSRTC)

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಅಪಘಾತ ಪರಿಹಾರ ನಿಧಿ ಟ್ರಸ್ಟ್ ನೀಡುವ ಪರಿಹಾರವನ್ನು 2024 ಜನವರಿ 1 ರಿಂದ ಜಾರಿಗೆ ಬರುವಂತೆ 3 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದೆ.

ಅಪಘಾತಕ್ಕೀಡಾದವರ ಅವಲಂಬಿತರಿಗೆ ಪರಿಹಾರ ನೀಡಲು ಇನ್ನುಮಂದೆ 50 ರಿಂದ 99 ರೂಪಾಯಿಗಳ ಟಿಕೆಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಂದ 1 ರೂ. ಹಾಗೂ 100 ಮತ್ತು ಅದಕ್ಕಿಂತ ಹೆಚ್ಚಿನ ಟಿಕೆಟ್ ಮೌಲ್ಯದ ಪ್ರಯಾಣಿಕರಿಂದ 2 ರೂ. ಸಂಗ್ರಹಿಸಲಾಗುವುದು ಎಂದು ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿಂದೆ, 100 ರೂ ಮತ್ತು ಅದಕ್ಕಿಂತ ಹೆಚ್ಚಿನ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ 1 ರೂ ಮೊತ್ತವನ್ನು ಪರಿಹಾರ ನಿಧಿಗೆ ಸಂಗ್ರಹಿಸಲಾಗುತ್ತಿತ್ತು ಎಂದು ನಿಗಮ ತಿಳಿಸಿದೆ

Join Whatsapp
Exit mobile version