Home ಕರಾವಳಿ ಬಂಟ್ವಾಳ | KSRTC ಬಸ್ – ಎರಡು ಕಾರುಗಳ ನಡುವೆ ಅಪಘಾತ: ಹಲವರು ಗಂಭೀರ !

ಬಂಟ್ವಾಳ | KSRTC ಬಸ್ – ಎರಡು ಕಾರುಗಳ ನಡುವೆ ಅಪಘಾತ: ಹಲವರು ಗಂಭೀರ !

ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.


ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮಣಿಹಳ್ಳ ಚಂತಿಮಾರ್ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ.


ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಕೆಲಕಾಲ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Join Whatsapp
Exit mobile version