KSRTC ಬಸ್‌ ಅಪಘಾತ : ಇಬ್ಬರು ಸಾವು, 10 ಮಂದಿಗೆ ಗಾಯ

Prasthutha: January 23, 2022

ತುಮಕೂರು : ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ನಡೆದಿದೆ.

ರಸ್ತೆ ಬದಿ ಇದ್ದ ಭಿಕ್ಷುಕ ಸ್ಥಳದಲ್ಲೇ ಮೃತಪಟ್ಟಿದ್ದು, ರೈತ ಗೋಪಾಲ ನಾಯ್ಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರೂ, ಕೊನೆಗೆ ಮೃತಪಟ್ಟಿದ್ದಾರೆ. ಇನ್ನು ನಿರ್ವಾಹಕ ಸೇರಿ 10 ಮಂದಿಗೆ ಗಾಯಗಳಾಗಿವೆ.

ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಅಪಘಾತವಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!