KSRTC ಬಸ್ – ಕಾರು ಮುಖಾಮುಖಿ ಡಿಕ್ಕಿ; ನಾಲ್ವರು ಗಂಭೀರ

Prasthutha|

ಕಡಬ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳದಲ್ಲಿ ನಡೆದಿದೆ.

- Advertisement -

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ಅಪಘಾತಕ್ಕೆ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ  ಪುತ್ತೂರಿಗೆ ಕರೆದೊಯ್ಯಲಾಗಿದೆ.

Join Whatsapp