KSRTC ಬಸ್-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

Prasthutha|

ತುಮಕೂರು: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಕಾರುನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ಸೋಮವಾರ ಮುಂಜಾನೆ ನಡೆದಿದೆ.

- Advertisement -


ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ತುಮಕೂರು ಕಡೆಯಿಂದ ತೆರಳಿದ್ದ ಬಸ್, ತಿಪಟೂರು ಕಡೆಯಿಂದ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.



Join Whatsapp