ಮಾಸ್ಕ್ ಧರಿಸಲು ಹೇಳಿದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲು ಮುರಿದ ಯುವಕರು

Prasthutha: July 16, 2021

ಚಿಕ್ಕಬಳ್ಳಾಪುರ: ಬಸ್ ನಲ್ಲಿ ಪ್ರಯಾಣಿಸುವಾಗ ಮಾಸ್ಕ್ ಧರಿಸಬೇಕು ಎಂದು ಹೇಳಿದ್ದಕ್ಕೆ ಯುವಕರಿಬ್ಬರು ಕೆಎಸ್ ಆರ್ ಟಿ ಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಕೋಲಾರದಿಂದ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದ ಮುಳಬಾಗಿಲು ಡಿಪೋಗೆ ಸೇರಿದ ಕೆಎ 07 ಎಫ್ 1608 ಸಂಖ್ಯೆಯ ಬಸ್ ನ ಕಂಡಕ್ಟರ್ ಎಂ.ಸಿ.ಕೃಷ್ಣಯ್ಯ ಅವರ ಮೇಲೆ ಯುವಕರಿಬ್ಬರು ತೀವ್ರ ಹಲ್ಲೆ ನಡೆಸಿದ್ದು, ಕೃಷ್ಣಯ್ಯ ಅವರ ಹಲ್ಲು ಮುರಿದಿದೆ. ಅಲ್ಲದೇ, ಮುಖಮೂತಿ ನೋಡದೇ ಥಳಿಸಿ, ಎದೆ ಭಾಗಕ್ಕೆ ಗುದ್ದಿ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಕೃಷ್ಣಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಬಳ್ಳಾಫುರ ತಾಲೂಕಿನ ಚದಲಪುರದ ಬಳಿ ಬಸ್ ಹತ್ತಿದ್ದ ಯುವಕರು ಮಾಸ್ಕ್ ಧರಿಸಿರಲಿಲ್ಲ. ಇದನ್ನು ಗಮನಿಸಿದ ನಿರ್ವಾಹಕ ಎಂ.ಸಿ.ಕೃಷ್ಣಪ್ಪ ಯುವಕರನ್ನು ಪ್ರಶ್ನಿಸಿದ್ದಾರೆ. ಆದರೆ, ಪ್ರಶ್ನಿಸಿದ್ದನ್ನೇ ತಪ್ಪು ಎಂಬಂತೆ ವರ್ತಿಸಿದ ಯುವಕರು ಕೃಷ್ಣಪ್ಪ ಅವರೊಂದಿಗೆ ಜಗಳಕ್ಕೆ ನಿಂತಿದ್ದಾರೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳೀಯರ ಸಹಾಯದಿಂದ ಆರೋಪಿ ಯುವಕರನ್ನು ಪೊಲೀಸರಿಗೆ ಒಪ್ಪಿಸಲು ಪ್ರಯತ್ನಿಸಲಾಯಿತಾದರೂ ಓರ್ವ ಯುವಕ ಪೊಲೀಸ್ ಠಾಣೆಯ ಬಳಿಯೇ ತಪ್ಪಿಸಿಕೊಂಡು ಓಡಿಹೋಗಿದ್ದಾನೆ. ಸದ್ಯ ಮತ್ತೋರ್ವ ಯುವಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಇದೀಗ ಗಾಯಾಳು ಕೃಷ್ಣಪ್ಪ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!