ಸೂಚನಾ ಫಲಕವಿಲ್ಲದೇ ರಸ್ತೆ ಕಾಮಗಾರಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ KSRTC ಬಸ್

Prasthutha|

ಮಂಡ್ಯ: ಕೆಎಸ್ಆರ್ಟಿಸಿ ಬಸ್ಸೊಂದು ಇಲ್ಲಿನ ಹೆದ್ದಾರಿ ಬದಿಯಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಅಗೆದಿದ್ದ ಗುಂಡಿಗೆ ಉರುಳಿರುವ ಘಟನೆ ಮಂಡ್ಯದ ಮಾರೇಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

- Advertisement -


ಅದೃಷ್ಟವಶಾತ್ ಚಾಲಕ ಮತ್ತು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.


ಕಾಮಗಾರಿ ಬಗ್ಗೆ ರಸ್ತೆಯಲ್ಲಿ ಸೂಚನಾ ಫಲಕಗಳನ್ನು ಅಳವಡಿಸದೆ ಇರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಗಾಯಗೊಂಡ ಬಸ್ ಚಾಲಕ ಹೇಳಿದ್ದಾರೆ.

Join Whatsapp