ಬೆಂಗಳೂರು : ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ತಾರಕಕ್ಕೇರಿದೆ. ಬೇಡಿಕೆ ಈಡೇರಿಸುವಂತೆ ಇದು ಬೆಳಗ್ಗಿನಿಂದಲೇ ಬಸ್ ಗಳನ್ನು ರಸ್ತೆಗಿಳಸದೆ ಪ್ರತಿಭಟನೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ, ಬೆಂಗಳೂರು-ನೆಲಮಂಗಲ ಹೆದ್ದಾರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಕಲಬುರಗಿ, ಶಿವಮೊಗ್ಗ, ರಾಮನಗರದಲ್ಲೂ ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ ನಡೆದಿದೆ ಎಂದು ವರದಿಗಳು ತಿಳಿಸಿವೆ. ನೆಲಮಂಗಲ ಡಿಪೊಗೆ ಸೇರಿದ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡು ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬಸ್ ಗ್ಲಾಸ್ ಒಡೆದು, ಚಾಲಕನ ಕಣ್ಣಿಗೆ ತಗುಲಿ ಗಾಯವಾಗಿದೆ.
ರಾಮನಗರ ಜಿಲ್ಲೆಯ ಚೆನ್ನಪಟ್ಟನದ ಮುದುಗೆರೆ ಗ್ರಾಮದಲ್ಲೂ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಮೇಲೆ ಕಲ್ಲುತೂರಲಾಗಿದೆ.
ಈ ನಡುವೆ, ಕೆಲವೇ ಕ್ಷಣಗಳಲ್ಲಿ ಸಾರಿಗೆ ಸಚಿವರು ಬಸ್ ನೌಕರರ ಮುಖಂಡರ ಜೊತೆಗೆ ಮಾತುಕತೆ ನಡೆಯಲಿದೆ. ಈ ಸಭೆಯಲ್ಲಿ ನೌಕರರ ಮನವೊಲಿಸುವಲ್ಲಿ ಸರಕಾರ ಯಶಸ್ವಿಯಾಗಲಿದೆಯೇ ಕಾದು ನೊಡಬೇಕು.