ಸಾರಿಗೆ ನೌಕರರ ಮುಷ್ಕರ ಅಂತ್ಯ | ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಸಾಧ್ಯತೆ

Prasthutha|

ಬೆಂಗಳೂರು : ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿರುವ ಮಾಹಿತಿ ಮಾಧ್ಯಮಗಳಿಂದ ಲಭ್ಯವಾಗಿದ್ದು, ರಾಜ್ಯದ ಹಲವೆಡೆ ಬಸ್ ಸಂಚಾರ ಆರಂಭವಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

- Advertisement -

ಇನ್ನೊಂದೆಡೆ, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ಹಿಂಪಡೆಯಲು ಉದ್ದೇಶಿಸಲಾಗಿದೆ. ಆದರೆ, ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ. ಸಾರಿಗೆ ನೌಕರರ ಜೊತೆ ಮಾತನಾಡಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಾಧ್ಯಮಗಳ ಮೂಲಕ ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಹಿತಿ ಗೊತ್ತಾಗಿದೆ. ನಾನು ಯಾರ ಬಗ್ಗೆಯೂ ಟೀಕೆ-ಟಿಪ್ಪಣಿ ಮಾಡುವುದಿಲ್ಲ. ರಾಜ್ಯದ ಹಲವೆಡೆ ಸಂಚಾರ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

- Advertisement -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಅಂತ್ಯಗೊಳ್ಳುವ ಸಾಧ್ಯತೆ ಇದ್ದು, ಅಧಿಕೃತ ನಿರ್ಧಾರ ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು, ಕೋವಿಡ್‌ ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ 30 ಲಕ್ಷ ಪರಿಹಾರ, ಮೇಲಾಧಿಕಾರಿಗಳ ಕಿರುಕುಳಕ್ಕೆ ಬ್ರೇಕ್‌, ವೇತನ ಹೆಚ್ಚಳ ಹಾಗೂ ತಾರತಮ್ಯ ನಿವಾರಣೆ ವಿಚಾರಗಳನ್ನು ಮುಂದಿಟ್ಟುಕೊಂಡು ಕಳೆದ ನಾಲ್ಕು ದಿನಗಳಿಂದ ನಾಲ್ಕು ವಿಭಾಗಗಳ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ.

Join Whatsapp