ನಾಳೆ ಸಾರಿಗೆ ನೌಕರರ ಬೃಹತ್ ಪ್ರತಿಭಟನೆ

Prasthutha|

ಬೆಂಗಳೂರು : ರಾಜ್ಯ ಬಿಜೆಪಿ ಸರಕಾರಕ್ಕೆ ಈಗ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ನಾಳೆ ಸಾರಿಗೆ ನೌಕರರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ತಮ್ಮನ್ನು ಸರಕಾರಿ ನೌಕರರನ್ನಾಗಿ ಘೋಷಿಸುವಂತೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಸಾರಿಗೆ ನೌಕರರ ಬೃಹತ್ ಪ್ರತಿಭಟನೆ ನಡೆಯಲಿದೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಿಧಾನಸೌಧಕ್ಕೆ ಕಾಲ್ನಡಿಗೆಯಲ್ಲಿ ನೌಕರರು ಜಾಥಾ ತೆರಳಲಿದ್ದಾರೆ. ವಿವಿಧ ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ.

- Advertisement -

ಬಿಎಂಟಿಸಿ, ಈಶಾನ್ಯ ಮತ್ತು ವಾಯುವ್ಯ ಸಾರಿಗೆ ನಿಗಮಗಳಿಂದ ಸುಮಾರು ಹತ್ತು ಸಾವಿರ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

- Advertisement -