KSRTC ಬಸ್ ಟಿಕೆಟ್ ದರ ಹೆಚ್ಚಿಸುವುದಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ

Prasthutha|

ಬೆಂಗಳೂರು: KSRTC ಬಸ್ ಟಿಕೆಟ್ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎನ್ನಲಾಗಿತ್ತು. ಆದರೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದಿದ್ದಾರೆ.

ಕೆ ಎಸ್ ಆರ್ ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವರು, ಶ್ರೀನಿವಾಸ್ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆ ಮಾಡಿಲ್ಲ ಎಂದು ತಿಳಿಸಿದರು.

- Advertisement -

ರಾಜ್ಯ ಸರ್ಕಾರಕ್ಕೆ ಸಾರಿಗೆ ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಅಲ್ಲದೆ, ಟಿಕೆಟ್ ದರ ಏರಿಸುವಂತ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲ ಎಂದು ಸಾರಿಗೆ ಸಚಿವರು ಸ್ಪಷ್ಟ ಪಡಿಸಿದರು.



Join Whatsapp