ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದ್ದು, ಈ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ ಗಳನ್ನು ನಿಯೋಜನೆ ಮಾಡಲಾಗುತ್ತಿದೆ ಎಂದು ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 9 ಮತ್ತು 10ರಂದು ನಿಗಮದ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಹೀಗಾಗಿ ದೂರದ ಊರಿಗೆ ಪ್ರಯಾಣಿಸುವವರು, ಮುಂಚಿತವಾಗಿ ಹಂತಹಂತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಯೋಜಿಸಿಕೊಂಡು ನಿಗಮದ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.