ಶೀಘ್ರದಲ್ಲೇ ರಸ್ತೆಗೆ ಇಳಿಯಲಿದೆ ಕೆಎಸ್​ಆರ್​ಟಿಸಿ ಹೊಸ ವೋಲ್ವೋ ಬಸ್

Prasthutha|

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಯ ಹೊಸ 9600 VOLVO Multiaxle ಸೀಟರ್ ಪ್ರೋಟೋಟೈಪ್ ಬಸ್ಸನ್ನು ಇಂದು (ಜು.06) ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಪರಿವೀಕ್ಷಣೆ ನಡೆಸಿದರು.

- Advertisement -

ಸಚಿವ ರಾಮಲಿಂಗಾರೆಡ್ಡಿ ಬಸ್ಸನ್ನು ವೀಕ್ಷಿಸಿ ಬಹುಮೆಚ್ಚುಗೆ ಸೂಚಿಸಿ, ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ‌ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು.

ವಿಂಡ್‌ಶೀಲ್ಡ್ ಗಾಜು ಶೇ 9.5 ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ. ವಿಶಾಲ ಲಗೇಜ್ ಸ್ಥಳಾವಕಾಶವಿದ್ದು ಶೇ 20% ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯವಿರುತ್ತದೆ.

- Advertisement -

USB + C ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿದೆ. ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾನಿಯಂತ್ರಣಾ ವ್ಯವಸ್ಥೆ ಇರುತ್ತದೆ.

ಉನ್ನತ ದರ್ಜೆ/ ವಿನ್ಯಾಸದ ಆಸನಗಳು ಮತ್ತು ಸಾಮಗ್ರಿಗಳ ಬಳಕೆಯಿಂದ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಸೌಕರ್ಯ. ವಿಶಾಲವಾದ ಪ್ಯಾಂಟೋಗ್ರಾಫಿಕ್ ವಿನ್ಯಾಸದಿಂದ ವಾಹನದ ನಿರ್ವಹಣೆ ಕೈಗೊಳ್ಳಲು ಸುಲಭವಾಗಿರುತ್ತದೆ.

ಹಿಂಭಾಗದಲ್ಲಿ fog light ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಇರುತ್ತದೆ.



Join Whatsapp